1 Corinthians 12:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಜನರು ಗುಣಪಡಿಸುವ ವರವನ್ನು ಹೊಂದಿಲ್ಲ. ಎಲ್ಲಾ ಜನರು ವಿವಿಧ ಭಾಷೆಗಳನ್ನು ಮಾತಾಡುವುದಿಲ್ಲ. ಎಲ್ಲಾ ಜನರು ಆ ಭಾಷೆಗಳನ್ನು ಅನುವಾದಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?
Kannada BSI Bible 2016
ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ವಾಣಿಗಳನ್ನಾಡುವರೋ? ವಾಣಿಗಳ ಅರ್ಥವನ್ನು ಹೇಳುವದಕ್ಕೆ ಎಲ್ಲರಿಗೂ ಶಕ್ತಿಯುಂಟೋ?
Kannada Bible (KNCL) BSI 2016
ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲರೂ ರೋಗಗಳನ್ನು ಗುಣಪಡಿಸುವ ವರವನ್ನು ಹೊಂದಿದವರೋ? ಎಲ್ಲರೂ ಪರೋಪಕಾರಿಗಳೋ? ಎಲ್ಲರೂ ಆಡಳಿತಗಾರರೋ? ಎಲ್ಲರೂ ಅನ್ಯಭಾಷೆಗಳನ್ನಾಡುವವರೋ? ಅಥವಾ ಅನ್ಯಭಾಷೆಗಳ ವ್ಯಾಖ್ಯಾನ ಮಾಡುವವರೋ?