1 Corinthians 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಬಾಲಕನಾಗಿದ್ದಾಗ ಬಾಲಕನಂತೆ ಮಾತಾಡಿದೆನು, ಆಲೋಚಿಸಿದೆನು, ಯೋಜನೆಗಳನ್ನು ಮಾಡಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದ ನಡವಳಿಕೆಯನ್ನು ಬಿಟ್ಟುಬಿಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
Kannada BSI Bible 2016
ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಾಲಕನಾಗಿದ್ದಾಗ ಬಾಲಕನ ಮಾತುಗಳನ್ನಾಡಿದೆನು, ಬಾಲಕನ ಸುಖ ದುಃಖಗಳನ್ನು ಅನುಭವಿಸಿದೆನು, ಬಾಲಕನ ಆಲೋಚನೆಗಳನ್ನು ಮಾಡಿಕೊಂಡೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
Kannada Bible (KNCL) BSI 2016
ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.