1 Corinthians 13:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
Kannada BSI Bible 2016
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.
Kannada Bible (KNCL) BSI 2016
ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.