1 Corinthians 13:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
Kannada BSI Bible 2016
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.
Kannada Bible (KNCL) BSI 2016
ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.