1 Corinthians 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
Kannada BSI Bible 2016
ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗಿರುವದೆಲ್ಲವನ್ನು ಅನ್ನದಾನಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
Kannada Bible (KNCL) BSI 2016
ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.