1 Corinthians 13:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
Kannada BSI Bible 2016
ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;
Kannada Bible (KNCL) BSI 2016
ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,