1 Corinthians 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರೀತಿಯು ಎಂದಿಗೂ ಕೊನೆಗೊಳ್ಳುವುದಿಲ್ಲ. ಪ್ರವಾದಿಸುವ ವರಗಳಿವೆ, ಆದರೆ ಅವು ಕೊನೆಗೊಳ್ಳುತ್ತವೆ. ವಿವಿಧ ಭಾಷೆಗಳಲ್ಲಿ ಮಾತಾಡುವ ವರಗಳಿವೆ, ಆದರೆ ಆ ವರಗಳು ಕೊನೆಗೊಳ್ಳುತ್ತವೆ. ಜ್ಞಾನವೆಂಬ ವರವೂ ಇದೆ, ಆದರೆ ಅದೂ ಕೊನೆಗೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
Kannada BSI Bible 2016
ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.
Kannada Bible (KNCL) BSI 2016
ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.