1 Corinthians 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ನಿಮಗೂ ಅನ್ವಯಿಸುತ್ತದೆ. ನೀವು ಆತ್ಮಿಕ ವರಗಳನ್ನು ಬಹಳವಾಗಿ ಅಪೇಕ್ಷಿಸುತ್ತೀರಿ. ಆದ್ದರಿಂದ, ಸಭೆಯು ದೃಢವಾಗಿ ಬೆಳೆಯಲು ಸಹಾಯಕರವಾದ ವರಗಳನ್ನು ಹೊಂದಿಕೊಳ್ಳಲು ಹೆಚ್ಚಾಗಿ ಪ್ರಯತ್ನಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.
Kannada BSI Bible 2016
ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ನೀವೂ ಆತ್ಮಪ್ರೇರಿತವಾದ ನುಡಿಗಳನ್ನಾಡುವದಕ್ಕೆ ಅಪೇಕ್ಷಿಸುವವರಾಗಿರುವದರಿಂದ ಸಭೆಗೆ ಭಕ್ತಿವೃದ್ಧಿ ಉಂಟಾಗುವ ಹಾಗೆ ಅದಕ್ಕಿಂತಲೂ ಹೆಚ್ಚಾದದ್ದನ್ನು ಮಾಡುವದಕ್ಕೆ ಪ್ರಯತ್ನಿಸಿರಿ.
Kannada Bible (KNCL) BSI 2016
ಆದ್ದರಿಂದ ಪವಿತ್ರಾತ್ಮ ವರಗಳ ಮೇಲೆ ಆಸಕ್ತಿಯುಳ್ಳ ನೀವು, ಧರ್ಮಸಭೆಯನ್ನು ಅಭಿವೃದ್ಧಿಗೊಳಿಸಬಲ್ಲ ವರಗಳ ಮೇಲೆ ಆಸಕ್ತರಾಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆಯೇ, ನೀವು ಸಹ ಆತ್ಮಿಕ ವರಗಳನ್ನು ಬಯಸುವುದರಿಂದ, ಸಭೆಗೆ ಭಕ್ತಿವೃದ್ಧಿ ಉಂಟುಮಾಡುವ ವರಗಳನ್ನೇ ಸಮೃದ್ಧವಾಗಿ ಪ್ರಯತ್ನಿಸಿರಿ.