1 Corinthians 14:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸಭಾಕೂಟಗಳಲ್ಲಿ ಅರ್ಥವಾಗದಂಥ ಪರಭಾಷೆಯಲ್ಲಿ ಸಾವಿರಾರು ಮಾತುಗಳನ್ನು ಹೇಳುವುದಕ್ಕಿಂತ ಅರ್ಥವಾಗುವಂಥ ಕೆಲವೇ ಮಾತುಗಳನ್ನು ಹೇಳಲು ಇಷ್ಟಪಡುತ್ತೇನೆ. ಇತರರಿಗೆ ಉಪದೇಶ ಮಾಡುವುದಕ್ಕಾಗಿ ನಾನು ತಿಳುವಳಿಕೆಯಿಂದ ಮಾತಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.
Kannada BSI Bible 2016
ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಸಭೆಯಲ್ಲಿ ವಾಣಿಯಿಂದ ಹತ್ತು ಸಾವಿರ ಮಾತುಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
Kannada Bible (KNCL) BSI 2016
ಆದರೂ ಸಭೆಯಲ್ಲಿ ಪರವಶನಾಗಿ ಹತ್ತುಸಾವಿರ ನುಡಿಗಳನ್ನಾಡುವ ಬದಲು ಮನಸ್ಸಾರೆ ಐದೇ ಮಾತುಗಳನ್ನಾಡಿ ಉಪದೇಶಿಸುವುದು ಉತ್ತಮವೆಂದು ನನಗೆ ತೋರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಸಭೆಯಲ್ಲಿ ಅನ್ಯಭಾಷೆಗಳಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ, ಇತರರಿಗೆ ಉಪದೇಶ ಮಾಡುವುದನ್ನೇ ನಾನು ಇಷ್ಟಪಡುತ್ತೇನೆ.