1 Corinthians 14:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.
Kannada BSI Bible 2016
ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಾಣಿಯನ್ನಾಡುವವನು ದೇವರ ಸಂಗಡ ಮಾತಾಡುತ್ತಾನೆ ಹೊರತು ಮನುಷ್ಯರ ಸಂಗಡ ಆಡುವದಿಲ್ಲ. ಅವನು ಆತ್ಮಪ್ರೇರಿತನಾಗಿ ರಹಸ್ಯಾರ್ಥಗಳನ್ನು ನುಡಿಯುತ್ತಿದ್ದರೂ ಯಾರೂ ತಿಳುಕೊಳ್ಳುವದಿಲ್ಲ.
Kannada Bible (KNCL) BSI 2016
ಪರವಶಾಭಾಷೆಯನ್ನು ಆಡುವವನು ಮಾನವನೊಡನಲ್ಲ, ದೇವರೊಡನೆ ಮಾತನಾಡುತ್ತಾನೆ. ಪವಿತ್ರಾತ್ಮರ ಪ್ರೇರಣೆಯಿಂದ ನಿಗೂಢ ವಿಷಯಗಳ ಬಗ್ಗೆ ಮಾತನಾಡುವುದರಿಂದ ಯಾರೂ ಆತನ ಮಾತನ್ನು ಅರ್ಥಮಾಡಿಕೊಳ್ಳಲಾರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ಯಭಾಷೆಗಳನ್ನು ಆಡುವವನು ಮನುಷ್ಯರ ಸಂಗಡವಲ್ಲ, ದೇವರೊಂದಿಗೆ ಮಾತನಾಡುತ್ತಾನೆ. ಅವನು ಮಾತನಾಡುವುದನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಆತ್ಮದಲ್ಲಿ ರಹಸ್ಯಗಳನ್ನು ಮಾತನಾಡುವವನಾಗಿದ್ದಾನೆ.