1 Corinthians 14:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ಆ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.
Kannada BSI Bible 2016
ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಹೃದಯದ ರಹಸ್ಯಗಳು ಬೈಲಾಗುವವು; ಮತ್ತು ಅಡ್ಡಬಿದ್ದು ದೇವರನ್ನು ಆರಾಧಿಸಿ - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬದನ್ನು ಪ್ರಚುರ ಪಡಿಸುವನು.
Kannada Bible (KNCL) BSI 2016
ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು.