1 Corinthians 14:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.
Kannada BSI Bible 2016
ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೇನು, ಸಹೋದರರೇ? ನೀವು ಕೂಡಿ ಬಂದಿರುವಾಗ ಒಬ್ಬನು ಹಾಡುವದೂ, ಒಬ್ಬನು ಉಪದೇಶಮಾಡುವದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವದೂ, ಒಬ್ಬನು ವಾಣಿಯನ್ನಾಡುವದೂ, ಒಬ್ಬನು ಅದರ ಅರ್ಥವನ್ನು ಹೇಳುವದೂ ಉಂಟಷ್ಟೆ. ನೀವು ಏನೂ ನಡಿಸಿದರೂ ಭಕ್ತಿವೃದ್ಧಿಗಾಗಿಯೇ ನಡಿಸಿರಿ.
Kannada Bible (KNCL) BSI 2016
ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.