1 Corinthians 14:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅನುವಾದಕನು ಇಲ್ಲದಿದ್ದರೆ, ಪರಭಾಷೆಯಲ್ಲಿ ಮಾತಾಡುವವನು ಸಭೆಯಲ್ಲಿ ಮೌನವಾಗಿರಬೇಕು. ಆ ವ್ಯಕ್ತಿಯು ತನ್ನೊಂದಿಗೂ ದೇವರೊಂದಿಗೂ ಮಾತ್ರ ಮಾತಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ.
Kannada BSI Bible 2016
ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರ್ಥವನ್ನು ಹೇಳುವವನಿಲ್ಲದಿದ್ದರೆ ವಾಣಿಯನ್ನಾಡುವವನು ಸಭೆಯಲ್ಲಿ ಸುಮ್ಮಗಿರಲಿ; ತನ್ನೊಂದಿಗೆಯೂ ದೇವರೊಂದಿಗೆಯೂ ಮಾತಾಡಿಕೊಳ್ಳಲಿ.
Kannada Bible (KNCL) BSI 2016
ವಿವರಿಸಬಲ್ಲವರು ಯಾರೂ ಇಲ್ಲವಾದರೆ, ಪರವಶಾಭಾಷೆಗಳನ್ನು ಆಡುವವನು ಸಭೆಯಲ್ಲಿ ಮೌನದಿಂದಿರಲಿ. ತನ್ನೊಳಗೆ ದೇವರೊಡನೆ ಮಾತನಾಡಿಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರ್ಥವನ್ನು ಹೇಳುವವನಿಲ್ಲದಿದ್ದರೆ, ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಮೌನವಾಗಿರಲಿ. ಅವನು ತನ್ನೊಂದಿಗೂ ದೇವರೊಂದಿಗೂ ಮಾತನಾಡಿಕೊಳ್ಳಲಿ.