1 Corinthians 14:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.
Kannada BSI Bible 2016
ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಜನರ ಎಲ್ಲಾ ಸಭೆಗಳ ಮರ್ಯಾದೆಯ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಸುಮ್ಮಗಿರಬೇಕು; ಮಾತಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ಅಧೀನದಲ್ಲಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿಯದೆಯಲ್ಲಾ.
Kannada Bible (KNCL) BSI 2016
ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು.