1 Corinthians 14:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ತ್ರೀಯರು ಏನಾದರು ತಿಳಿದುಕೊಳ್ಳಬೇಕೆಂದಿದ್ದರೆ, ತಮ್ಮ ಮನೆಗಳಲ್ಲಿ ತಮ್ಮ ಗಂಡಂದಿರನ್ನು ಕೇಳಬೇಕು. ಬಹಿರಂಗ ಕೂಟದಲ್ಲಿ ಸ್ತ್ರೀಯರು ಮಾತಾಡುವಂಥದ್ದು ನಾಚಿಕೆಕರವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.
Kannada BSI Bible 2016
ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತಾಡುವದು ನಾಚಿಗೆಗೆಟ್ಟ ಕೆಲಸವಾಗಿದೆ.
Kannada Bible (KNCL) BSI 2016
ಅವರು ಏನನ್ನಾದರೂ ತಿಳಿಯಬಯಸಿದರೆ, ಮನೆಯಲ್ಲಿ ತಮ್ಮ ತಮ್ಮ ಗಂಡಂದಿರನ್ನು ಕೇಳಿ ತಿಳಿದುಕೊಳ್ಳಲಿ. ಮಹಿಳೆಯರು ಸಭಾಕೂಟದಲ್ಲಿ ಮಾತನಾಡುವುದು ಲಕ್ಷಣವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಏನಾದರೂ ಕಲಿಯಬಯಸಿದರೆ, ಮನೆಯಲ್ಲಿ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ನಾಚಿಕೆಪಡುವಂಥದಾಗಿದೆ.