1 Corinthians 14:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ತಾನು ಪ್ರವಾದಿಯೆಂದು ಅಥವಾ ತನ್ನಲ್ಲಿ ಆತ್ಮಿಕ ವರವಿದೆಯೆಂದು ಯೋಚಿಸುವುದಾದರೆ, ಇದು ಪ್ರಭುವಿನ ಆಜ್ಞೆಯೆಂದು ಅವನು ಅರ್ಥಮಾಡಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.
Kannada BSI Bible 2016
ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ದೇವರಾತ್ಮನಿಂದ ನಡಿಸಲ್ಪಡುವವನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತನ ವಿಧಿಯೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
Kannada Bible (KNCL) BSI 2016
ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ, ಆತ್ಮನ ವರಗಳನ್ನು ಹೊದಿದವನೆಂದಾಗಲಿ ಭಾವಿಸುವುದಾದರೆ, ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತದೇವರ ಆಜ್ಞೆಗಳೆಂದು ಸ್ಪಷ್ಟವಾಗಿ ತಿಳಿದುಕೊಳ್ಳಲಿ.