1 Corinthians 14:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ನೀವೆಲ್ಲರೂ ಹೊಂದಿರಬೇಕೆಂದು ನನ್ನ ಅಪೇಕ್ಷೆಯಾಗಿದೆ. ಆದರೆ ನೀವು ಪ್ರವಾದಿಸಬೇಕೆಂದು ನಾನು ಇನ್ನೂ ಹೆಚ್ಚಾಗಿ ಅಪೇಕ್ಷಿಸುತ್ತೇನೆ. ಕೇವಲ ವಿವಿಧ ಭಾಷೆಗಳನ್ನು ಮಾತನಾಡುವವನಿಗಿಂತಲೂ ಪ್ರವಾದಿಸುವವನು ಹೆಚ್ಚು ಶ್ರೇಷ್ಠನಾಗಿದ್ದಾನೆ. ಆದರೆ ವಿವಿಧ ಭಾಷೆಗಳಲ್ಲಿ ಮಾತಾಡುವವನು ಆ ಭಾಷೆಗಳನ್ನು ಅನುವಾದಿಸಬಲ್ಲವನಾಗಿದ್ದರೆ, ಅವನು ಪ್ರವಾದಿಸುವವನಷ್ಟೇ ಶ್ರೇಷ್ಠನಾಗುತ್ತಾನೆ. ಆಗ ಅವನು ಹೇಳುವ ಸಂಗತಿಗಳ ಮೂಲಕ ಸಭೆಗೆ ಸಹಾಯವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.
Kannada BSI Bible 2016
ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೆಲ್ಲರೂ ವಾಣಿಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ವಾಣಿಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ವಾಣಿಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
Kannada Bible (KNCL) BSI 2016
ನೀವೆಲ್ಲರೂ ಪರವಶಾಭಾಷೆಗಳನ್ನು ಆಡಬಹುದಾದರೂ ದೇವರ ವಾಕ್ಯವನ್ನು ಸಾರುವವರಾಗಬೇಕೆಂಬುದೇ ನನ್ನ ಅಭಿಲಾಷೆ. ಪರವಶಾಭಾಷೆಗಳನ್ನು ಆಡುವಾತನು ಧರ್ಮಸಭೆಯ ಅಭಿವೃದ್ಧಿಗಾಗಿ ತನ್ನ ಮಾತಿನ ಅರ್ಥವನ್ನು ಹೇಳಲಾರನಾದರೆ, ಅವನಿಗಿಂತಲೂ ದೇವರ ವಾಕ್ಯವನ್ನು ಸಾರುವವನೇ ಶ್ರೇಷ್ಠನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.