1 Corinthians 14:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಾನು ವಿವಿಧ ಭಾಷೆಗಳನ್ನು ಮಾತಾಡುವವನಾಗಿ ನಿಮ್ಮ ಬಳಿಗೆ ಬಂದರೆ ಅದರಿಂದ ನಿಮಗೆ ಸಹಾಯವಾಗುವುದೇ? ಇಲ್ಲ! ನಾನು ನಿಮಗೆ ಹೊಸ ಸತ್ಯವನ್ನು, ಜ್ಞಾನವನ್ನು, ಪ್ರವಾದನೆಯನ್ನು ಮತ್ತು ಉಪದೇಶವನ್ನು ತಂದರೆ ಮಾತ್ರ ನಿಮಗೆ ಸಹಾಯವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?
Kannada BSI Bible 2016
ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ ಜ್ಞಾನವಾಕ್ಯವನ್ನಾಡದೆ ಪ್ರವಾದನೆಯನ್ನು ಹೇಳದೆ ಉಪದೇಶಮಾಡದೆ ವಾಣಿಗಳನ್ನು ಮಾತ್ರ ಆಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?
Kannada Bible (KNCL) BSI 2016
ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರ ಶ್ರುತಿಯನ್ನು, ನೈಜ ಜ್ಞಾನವನ್ನು, ದೇವರ ವಾಕ್ಯವನ್ನು, ದಿವ್ಯಬೋಧೆಯನ್ನು ನೀಡದೆ ಪರವಶಾಭಾಷೆಗಳಲ್ಲಿಯೇ ಮಾತನಾಡಿದರೆ ನಿಮಗೆ ಸಿಗುವ ಲಾಭವಾದರೂ ಏನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?