1 Corinthians 15:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.
Kannada BSI Bible 2016
ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿದಿರಿ, ಅದರಲ್ಲಿ ನಿಂತಿದ್ದೀರಿ.
Kannada Bible (KNCL) BSI 2016
ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.