1 Corinthians 15:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?
Kannada BSI Bible 2016
ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರೋಣವಾಗುತ್ತಿರುವಲ್ಲಿ ನಿಮ್ಮೊಳಗೆ ಕೆಲವರು - ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವದು ಹೇಗೆ?
Kannada Bible (KNCL) BSI 2016
ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?