1 Corinthians 15:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.
Kannada BSI Bible 2016
ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.
Kannada Bible (KNCL) BSI 2016
ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.