1 Corinthians 15:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಮನುಷ್ಯನು (ಆದಾಮನು) ಮಾಡಿದ ಕಾರ್ಯದಿಂದಾಗಿ ಜನರು ಮರಣ ಹೊಂದುವಂತೆಯೇ ಒಬ್ಬ ಮನುಷ್ಯನ (ಕ್ರಿಸ್ತನ) ಮೂಲಕವಾಗಿಯೇ ಜನರು ಜೀವಂತವಾಗಿ ಎದ್ದುಬರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ.
Kannada BSI Bible 2016
ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನ ಮೂಲಕ ಮರಣವು ಉಂಟಾದ ಕಾರಣ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವುಂಟಾಗುವದು.
Kannada Bible (KNCL) BSI 2016
ಒಬ್ಬ ಮನುಷ್ಯನಿಂದ ಸಾವು ಸಂಭವಿಸಿದಂತೆಯೇ ಒಬ್ಬ ಮನುಷ್ಯನಿಂದಲೇ ಸತ್ತವರಿಗೆ ಪುನರುತ್ಥಾನವು ಪರಿಣಮಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಒಬ್ಬ ಮನುಷ್ಯನ ಮೂಲಕ ಮರಣವು ಬಂದಂತೆಯೇ, ಒಬ್ಬ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವು ಸಹ ಬರುವುದು.