1 Corinthians 15:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.
Kannada BSI Bible 2016
ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.
Kannada Bible (KNCL) BSI 2016
ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.