1 Corinthians 15:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಅಂತ್ಯ ಬರುವುದು. ಕ್ರಿಸ್ತನು ಎಲ್ಲಾ ಅಧಿಪತಿಗಳನ್ನು, ಅಧಿಕಾರಗಳನ್ನು ಮತ್ತು ಶಕ್ತಿಗಳನ್ನು ನಾಶಮಾಡುವನು. ಬಳಿಕ ಕ್ರಿಸ್ತನು ತಂದೆಯಾದ ದೇವರಿಗೆ ರಾಜ್ಯವನ್ನು ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.
Kannada BSI Bible 2016
ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿ.
Kannada Bible (KNCL) BSI 2016
ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.