1 Corinthians 15:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
"ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.
Kannada BSI Bible 2016
ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆಂಬದಾಗಿ ಹೇಳಿಯದೆಯಲ್ಲಾ. ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿ ಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
Kannada Bible (KNCL) BSI 2016
“ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ.