1 Corinthians 15:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
Kannada BSI Bible 2016
ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
Kannada Bible (KNCL) BSI 2016
ಎಲ್ಲವೂ ಕ್ರಿಸ್ತಯೇಸುವಿಗೆ ಅಧೀನವಾದಾಗ ಪುತ್ರನಾದ ಅವರೇ, ಎಲ್ಲವನ್ನು ತನಗೆ ಅಧೀನಪಡಿಸಿದ ದೇವರಿಗೆ ಅಧೀನರಾಗುತ್ತಾರೆ. ಆಗ ದೇವರು ಸರ್ವರಿಗೆ ಸರ್ವಸ್ವವೂ ಆಗುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.