1 Corinthians 15:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.
Kannada BSI Bible 2016
ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವದೇ ಇಲ್ಲವೆಂಬದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.
Kannada Bible (KNCL) BSI 2016
ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?