1 Corinthians 15:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
Kannada BSI Bible 2016
ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗಿರುವ ಹೆಚ್ಚಳದ ಮೇಲೆ ಆಣೆ ಇಟ್ಟು ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
Kannada Bible (KNCL) BSI 2016
ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.