1 Corinthians 15:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, "ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
Kannada BSI Bible 2016
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
Kannada Bible (KNCL) BSI 2016
ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಎಫೆಸದಲ್ಲಿ ಕಾಡು ಮೃಗಗಳೊಂದಿಗೆ ಹೋರಾಟ ಮಾಡಿದ್ದು ಕೇವಲ ಮಾನವ ಕಾರಣಗಳಿಂದ ಮಾತ್ರವಾಗಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರು ಎದ್ದುಬರುವುದಿಲ್ಲವಾದರೆ, “ತಿನ್ನೋಣ, ಕುಡಿಯೋಣ, ನಾಳೆ ಮರಣ ಹೊಂದೋಣ.”