1 Corinthians 15:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
"ಸತ್ತವರು ಹೇಗೆ ಎದ್ದುಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?" ಎಂದು ಕೆಲವರು ಕೇಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.
Kannada BSI Bible 2016
ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರು ಹೇಗೆ ಎಬ್ಬಿಸಲ್ಪಡುತ್ತಾರೆ, ಎಂಥ ದೇಹದಿಂದ ಬರುತ್ತಾರೆ ಎಂದು ಒಬ್ಬನು ಕೇಳಾನು.
Kannada Bible (KNCL) BSI 2016
ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸತ್ತವರು ಎದ್ದೇಳುವುದು ಹೇಗೆ? ಎಂಥ ದೇಹದಿಂದ ಎದ್ದು ಬರುತ್ತಾರೆ?” ಎಂದು ಯಾರಾದರೂ ಕೇಳಬಹುದು.