1 Corinthians 15:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.
Kannada BSI Bible 2016
ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ಗೋದಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
Kannada Bible (KNCL) BSI 2016
ನೀನು ಬಿತ್ತುವುದು ಗೋದಿಯನ್ನು ಅಥವಾ ಇನ್ನಾವುದೋ ಕಾಳನ್ನು; ಮುಂದಕ್ಕೆ ಬೆಳೆಯಲಿರುವ ಇಡೀ ಗಿಡವನ್ನಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಒಂದು ವೇಳೆ ಗೋಧಿಯನ್ನಾಗಲಿ, ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ, ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವುದಿಲ್ಲ.