1 Corinthians 15:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.
Kannada BSI Bible 2016
ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚುಕಡಿಮೆಯುಂಟಷ್ಟೆ.
Kannada Bible (KNCL) BSI 2016
ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನ ಮಹಿಮೆ ಬೇರೆ, ಚಂದ್ರನ ಮಹಿಮೆಯೇ ಬೇರೆ ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಏಕೆಂದರೆ, ನಕ್ಷತ್ರ ನಕ್ಷತ್ರಕ್ಕೆ ಮಹಿಮೆಯಲ್ಲಿ ವ್ಯತ್ಯಾಸವಾಗಿರುವುದು.