1 Corinthians 15:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.
Kannada BSI Bible 2016
ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ನಿರ್ಲಯಾವಸ್ಥೆಯಲ್ಲಿ ಎದ್ದುಬರುವದು;
Kannada Bible (KNCL) BSI 2016
ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.