1 Corinthians 15:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿತ್ತಲ್ಪಟ್ಟ ದೇಹವು ಭೌತಿಕವಾದದ್ದು. ಆದರೆ ಅದು ಎದ್ದುಬಂದಾಗ, ಆತ್ಮಿಕ ದೇಹವಾಗಿರುತ್ತದೆ. ಭೌತಿಕ ದೇಹವಿದೆ. ಆದ್ದರಿಂದ ಆತ್ಮಿಕ ದೇಹವೂ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ.
Kannada BSI Bible 2016
ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎದ್ದು ಬರುವದು. ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
Kannada Bible (KNCL) BSI 2016
ಬಿತ್ತಿದ್ದು ಭೌತಿಕ ದೇಹ; ಪುನರುತ್ಥಾನ ಹೊಂದುವಂಥದ್ದು ಆಧ್ಯಾತ್ಮಿಕ ದೇಹ. ಭೌತಿಕ ದೇಹ ಇರುವುದು ಸತ್ಯವಾದರೆ ಆಧ್ಯಾತ್ಮಿಕ ದೇಹ ಇರುವುದೂ ಸತ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು.