1 Corinthians 15:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
"ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
Kannada BSI Bible 2016
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ಮನುಷ್ಯನಾದ ಆದಾಮನು ಬದುಕುವ ಪ್ರಾಣಿಯಾದನೆಂದು ಬರೆದದೆಯಲ್ಲಾ. ಕಡೇ ಆದಾಮನೋ ಬದುಕಿಸುವ ಆತ್ಮನು.
Kannada Bible (KNCL) BSI 2016
ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.