1 Corinthians 15:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ.
Kannada BSI Bible 2016
ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಸಂಬಂಧಪಟ್ಟವರೂ ಅಂಥವರೇ.
Kannada Bible (KNCL) BSI 2016
ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು.