1 Corinthians 15:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
Kannada BSI Bible 2016
ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾನು ಹೇಳುವದೇನಂದರೆ - ರಕ್ತ ಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರದು; ಲಯವಾಗುವ ವಸ್ತು ನಿರ್ಲಯಪದವಿಗೆ ಬಾಧ್ಯವಾಗುವದಿಲ್ಲ.
Kannada Bible (KNCL) BSI 2016
ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.