1 Corinthians 15:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.
Kannada BSI Bible 2016
ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಳಿರಿ, ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಿಮಗೆ ತಿಳಿಸುತ್ತೇನೆ - ನಾವೆಲ್ಲರೂ ನಿದ್ರೆ ಹೋಗುವದಿಲ್ಲ;
Kannada Bible (KNCL) BSI 2016
ಇಗೋ, ಕೇಳೀ! ಇದುವರೆಗೂ ನಿಗೂಢವಾಗಿದ್ದ ರಹಸ್ಯವನ್ನು ನಾನು ನಿಮಗೆ ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಅಂತಿಮ ಕಹಳೆಯು ಮೊಳಗಿದಾಗ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರಲ್ಲಿ ನಾವೆಲ್ಲರೂ ಮಾರ್ಪಡುವೆವು. ಹೌದು, ಕಹಳೆ ಮೊಳಗುವುದು. ಸತ್ತವರು ಪುನರುತ್ಥಾನಹೊಂದಿ ಅಮರರಾಗುವರು ಮತ್ತು ನಾವು ಮಾರ್ಪಡುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.