1 Corinthians 15:52 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
Kannada BSI Bible 2016
ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕಡೇ ತುತೂರಿಯ ಧ್ವನಿಯಾಗುವಾಗ ನಾವೆಲ್ಲರು ಒಂದು ಕ್ಷಣದಲ್ಲೇ ರೆಪ್ಪೆ ಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.