1 Corinthians 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.
Kannada BSI Bible 2016
ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಒಂದೇ ಸಮಯದಲ್ಲಿ ಐನೂರು ಮಂದಿಗಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ. ಕೆಲವರು ನಿದ್ರೆಹೋಗಿದ್ದಾರೆ.
Kannada Bible (KNCL) BSI 2016
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.