1 Corinthians 16:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.
Kannada BSI Bible 2016
ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಯಾರೂ ಅವನನ್ನು ಹೀನೈಸಬಾರದು. ಮತ್ತು ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ಎದುರುನೋಡುತ್ತಾ ಇದ್ದೇವೆ.
Kannada Bible (KNCL) BSI 2016
ಯಾರೂ ಆತನನ್ನು ತಾತ್ಸಾರ ಮಾಡದಿರಲಿ. ಸಮಾಧಾನದಿಂದ ಆತನು ನನ್ನ ಬಳಿಗೆ ಬರುವಂತೆ ಕಳುಹಿಸಿಕೊಡಿ. ಆತನ ಆಗಮನವನ್ನು ನಾನು ಇತರ ಸಹೋದರರೊಡನೆ ಎದುರುನೋಡುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ಅವನನ್ನು ಹೀನಾಯವಾಗಿ ಕಾಣಬಾರದು. ಆದರೆ ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ಎದುರು ನೋಡುತ್ತಿದ್ದೇನೆ.