1 Corinthians 16:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.
Kannada BSI Bible 2016
ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರನಾದ ಅಪೊಲ್ಲೋಸನ ಸಂಗತಿಯೇನಂದರೆ ಸಹೋದರರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ಅವನನ್ನು ಬಹಳವಾಗಿ ಬೇಡಿಕೊಂಡೆನು. ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ. ಒಳ್ಳೇ ಸಮಯ ಸಿಕ್ಕಿದಾಗ ಬರುವನು.
Kannada Bible (KNCL) BSI 2016
ಸಹೋದರರೇ, ಅಪೊಲೋಸನ ವಿಷಯವಾಗಿ ಹೇಳುವುದಾದರೆ, ಆತನು ಇತರ ಸಹೋದರರೊಡನೆ ನಿಮ್ಮ ಬಳಿಗೆ ಬರಬೇಕೆಂದು ನಾನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ತಕ್ಷಣವೇ ಬರಲು ಆತನಿಗೆ ಮನಸ್ಸಿಲ್ಲ; ಸದವಕಾಶ ದೊರಕಿದಾಗ ಬರುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಮ್ಮ ಸಹೋದರನಾದ ಅಪೊಲ್ಲೋಸನ ವಿಷಯವೇನೆಂದರೆ, ಅವನು ಇತರ ಸಹೋದರರೊಂದಿಗೆ ನಿಮ್ಮ ಬಳಿಗೆ ಬರಬೇಕೆಂದು ಅವನಿಗೆ ಬಹಳವಾಗಿ ಕೇಳಿಕೊಂಡೆನು. ಆದರೆ ಈಗ ಬರುವುದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿಲ್ಲ. ಅವನು ತನಗೆ ಸಂದರ್ಭ ಸಿಕ್ಕಿದಾಗ ಬರುವನು.