1 Corinthians 16:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.
Kannada BSI Bible 2016
ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಸ್ಯಸೀಮೆಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
Kannada Bible (KNCL) BSI 2016
ಏಷ್ಯ ಸೀಮೆಯಲ್ಲಿರುವ ಧರ್ಮಸಭೆಗಳ ಸಹೋದರರು ನಿಮಗೆ ವಂದನೆಗಳನ್ನು ತಿಳಿಸಿರುತ್ತಾರೆ. ಅಕ್ವಿಲನು ಮತ್ತು ಪ್ರಿಸಿಲ್ಲಳು ಹಾಗೂ ಅವರ ಮನೆಯಲ್ಲಿ ಸಭೆ ಸೇರುವ ಎಲ್ಲರೂ ಪ್ರಭುವಿನ ಹೆಸರಿನಲ್ಲಿ ನಿಮಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಷ್ಯಾದ ಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ.