1 Corinthians 16:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
Kannada BSI Bible 2016
ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಂದಾಗ ಹಣ ವಸೂಲುಮಾಡಬೇಕಾದ ಅವಶ್ಯವಾಗದಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದ ಸಂಪಾದನೆಯ ಮೇರೆಗೆ ವಾರವಾರದ ಮೊದಲನೆಯ ದಿನದಲ್ಲಿ ಗಂಟುಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು.
Kannada Bible (KNCL) BSI 2016
ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.