1 Corinthians 16:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
Kannada BSI Bible 2016
ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಂದ ಮೇಲೆ ನೀವು ಯಾರನ್ನು ಯೋಗ್ಯರೆಂದು ಸೂಚಿಸುವಿರೋ ಅವರನ್ನು ಯೆರೂಸಲೇವಿುಗೆ ನಿಮ್ಮ ಉಪಕಾರದ್ರವ್ಯವನ್ನು ತೆಗೆದುಕೊಂಡು ಹೋಗುವದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
Kannada Bible (KNCL) BSI 2016
ನಾನು ಬಂದ ನಂತರ ನಿಮ್ಮ ಕೊಡುಗೆಯನ್ನು ಪರಿಚಯ ಪತ್ರದ ಸಮೇತ ನೀವು ಆರಿಸಿದವರ ಕೈಯಲ್ಲಿ ಜೆರುಸಲೇಮಿಗೆ ಕಳುಹಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು.