1 Corinthians 16:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.
Kannada BSI Bible 2016
ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆದೇನು; ಮತ್ತು ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಬೇಕು.
Kannada Bible (KNCL) BSI 2016
ಬಹುಶಃ ನಾನು ನಿಮ್ಮೊಡನೆ ತಂಗಬಹುದು. ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಆಮೇಲೆ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹುಶಃ ನಾನು ಸ್ವಲ್ಪ ಸಮಯ ನಿಮ್ಮೊಂದಿಗೆ ಇದ್ದ ಮೇಲೆ ಅಥವಾ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮೊಂದಿಗೆ ಕಳೆಯಲು ಬಯಸುತ್ತೇನೆ. ಹೀಗೆ ನಾನು ಹೋಗಬೇಕಾದ ಸ್ಥಳಗಳಲ್ಲಿ ನೀವು ನನಗೆ ಸಹಾಯ ಮಾಡಬಹುದು.