1 Corinthians 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.
Kannada BSI Bible 2016
ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾನಂತೂ ದೇವರು ಹೇಳಿಕೊಟ್ಟ ಮಾತನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ ಜ್ಞಾನಾಡಂಬರದಿಂದಾಗಲಿ ಬರಲಿಲ್ಲ.
Kannada Bible (KNCL) BSI 2016
ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.