1 Corinthians 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು. ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
Kannada BSI Bible 2016
ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
Kannada Bible (KNCL) BSI 2016
ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.