1 Corinthians 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಹೇಗೆಂದರೆ: ಒಬ್ಬನ ಆಲೋಚನೆಗಳು ಅವನ ಆಂತರ್ಯದಲ್ಲಿರುವ ಜೀವಾತ್ಮವೊಂದಕ್ಕೆ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. ಅಂತೆಯೇ, ದೇವರ ಆಲೋಚನೆಗಳು ದೇವರಾತ್ಮನ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.
Kannada BSI Bible 2016
ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನ ಒಳಗಿನ ಆಲೋಚನೆಗಳು ಅವನಲ್ಲಿರುವ ಜೀವಾತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವದು? ಹಾಗೆಯೇ ದೇವರ ಆಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
Kannada Bible (KNCL) BSI 2016
ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.