1 Corinthians 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
Kannada BSI Bible 2016
ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳನ್ನು ಮಾನುಷಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ದೇವರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮಸಂಬಂಧವಾದವುಗಳನ್ನು ಆತ್ಮನಿಗೆ ಯುಕ್ತವಾದ ರೀತಿಯಲ್ಲಿ ವಿವರಿಸುತ್ತೇವೆ.
Kannada Bible (KNCL) BSI 2016
ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.